Manaluru: ಪಾಣೆ ಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿದರಾ ಈ ಮಹಿಳೆ; ಶಂಕೆಯಲ್ಲಿ ಹುಡುಕಾಟ
Saturday, November 20, 2021
ಬಂಟ್ವಾಳ: ನಗರದ ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಿದೆ.
ಇಂದು ಬೆಳಗ್ಗೆ 10 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿದ್ದನ್ನು ವಾಹನ ಸವಾರರೊಬ್ಬರು ನೋಡಿದ್ದು, ಈ ಬಗ್ಗೆ ಅವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳೀಯ ಮುಳುಗು ತಜ್ಞರು ದೋಣಿಯಲ್ಲಿ ನೇತ್ರಾವತಿ ಸೇತುವೆಯಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ ಅದಾಗಲೇ ಮಹಿಳೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.
ಆದರೆ ನದಿಗೆ ಹಾರಿರುವ ಮಹಿಳೆ ಯಾರು ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಘಟನೆ ನಡೆದ ಕೆಲವು ಸಮಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯಾಗಿತ್ತು. ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟಿದ್ದರು