Mangaluru: ಹೊಟ್ಟೆಯಲ್ಲಿ ಗೆಡ್ಡೆಯಾಗಿದೆ ಎಂದು ಅಪ್ರಾಪ್ತೆಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಶಾಕ್: ಏನಾಗಿದೆ ಗೊತ್ತೇ?
Saturday, November 20, 2021
ಮಂಗಳೂರು: ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಹೊಟ್ಟೆಯಲ್ಲಿ ಗಡ್ಡೆಯಾಗಿದೆ ಎಂದು ಪೋಷಕರು ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದಾರೆ. ಆಕೆಯನ್ನು ತಪಾಸಣೆ ಮಾಡಿದ ವೈದ್ಯರು ಹೇಳಿದ ಮಾತು ಕೇಳಿ ಪೋಷಕರು ಶಾಕ್ ಗೆ ಒಳಗಾಗಿದ್ದಾರೆ.
ಉಪ್ಪಿನಂಗಡಿ ನಿವಾಸಿಯಾದ ಈ ಅಪ್ರಾಪ್ತ ಬಾಲಕಿಯನ್ನು ತಪಾಸಣೆ ಮಾಡಿದ ವೈದ್ಯರು ಈಕೆ ತುಂಬು ಗರ್ಭಿಣಿ ಎಂದು ಹೇಳಿದ್ದಾರೆ. ಆಕೆ ಗುರುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಅತ್ಯಾಚಾರ ಮಾಡಿ ಮಗುವಿನ ಜನ್ಮಕ್ಕೆ ಕಾರಣನಾದ ಆರೋಪಿಯನ್ನು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಉಪ್ಪಿನಂಗಡಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಉಪ್ಪಿನಂಗಡಿಯ ಹಿರೆಬಂಡಾಡಿ ಗ್ರಾಮದ ಮದ್ಮಿತ್ತಿಮಾರು ನಿವಾಸಿ ಕೇಶವ(34) ಅತ್ಯಾಚಾರಗೈದು, ಮಗುವಿನ ಜನ್ಮಕ್ಕೆ ಕಾರಣನಾದ ಆರೋಪಿ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಹೊಟ್ಟೆಯಲ್ಲಿ ಗೆಡ್ಡೆ ಬೆಳೆದಿದೆ ಎಂದು ಪೋಷಕರು ಆಕೆಯನ್ನು ತಪಾಸಣೆಗೆಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತಪಾಸಣೆ ನಡೆಸಿದ ವೈದ್ಯರಿಗೆ ಆಕೆ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ. ತುಂಬು ಗರ್ಭಿಣಿಯಾದ ಅಪ್ರಾಪ್ತೆ ಇದೀಗ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆಸ್ಪತ್ರೆಯ ವೈದ್ಯಾಧಿಕಾರಿಗಳು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಬಾಲಕಿಯಲ್ಲಿ ವಿಚಾರಣೆ ನಡೆಸಿದಾಗ ಉಪ್ಪಿನಂಗಡಿಯ ಹಿರೆಬಂಡಾಡಿ ಗ್ರಾಮದ ಮದ್ಮಿತ್ತಿಮಾರು ನಿವಾಸಿ ಕೇಶವ ಅತ್ಯಾಚಾರಗೈದಿರುದಾಗಿ ಬಾಲಕಿ ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಕ್ಸೊ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ.