
Mangaluru: ಹಲವು ಮಹಿಳಾ ಸಿಬ್ಬಂದಿಗೆ ಕಚೇರಿಯಲ್ಲಿಯೇ ಲೈಂಗಿಕ ಕಿರುಕುಳ ಎಸಗಿರುವ ಆರೋಪಿ ವೈದ್ಯಾಧಿಕಾರಿ ಬಂಧನ
Friday, November 26, 2021
ಮಂಗಳೂರು: ಹಲವು ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ವೈದ್ಯಾಧಿಕಾರಿ ಡಾ. ರತ್ನಾಕರ್ ಅವರನ್ನು ಮಂಗಳೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ದ.ಕ.ಜಿಲ್ಲೆಯ ಕುಷ್ಠರೋಗ ನಿವಾರಣಾಧಿಕಾರಿಯಾಗಿರುವ ಡಾ.ರತ್ನಾಕರ್ ಮೇಲೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳಾ ಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯೋರ್ವರು ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಅವರಿಗೆ ದೂರು ದಾಖಲಿಸಿದ್ದಾರೆ. ಡಾ.ರತ್ನಾಕರ್ ತಮ್ಮ ಕಚೇರಿಯ ಮಹಿಳಾ ಸಿಬ್ಬಂದಿಗಳೊಂದಿಗೆ ಚೆಲ್ಲಾಟವಾಡಿರುವ ವೀಡಿಯೋ, ಫೋಟೋ ಸಹಿತ ಇಂದು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ಸಿಬ್ಬಂದಿಗೆ ಆತ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿದೆ.
ಈ ಬಗ್ಗೆ ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಸಂಪರ್ಕಕ್ಕೆ ಸಿಕ್ಕ ಮಹಿಳಾ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ. ಆದರೆ ಎಲ್ಲರೂ ದೂರು ನೀಡುವುದಕ್ಕೆ ನಿರಾಕರಿಸಿದ್ದಾರೆ. ಆದರೆ ತನಿಖೆಗೆ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಇದೀಗ ಡಾ.ರತ್ನಾಕರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ತಿಳಿಸಿದರು.