
ಕಾಮುಕ ಸಹೋದರನಿಂದಲೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ: ಸಾಂಸ್ಕೃತಿಕ ನಗರಿಯಲ್ಲೊಂದು ಹೇಯ ಕೃತ್ಯ
Monday, November 29, 2021
ಮೈಸೂರು: ಕಾಮುಕನೋರ್ವ ಒಡಹುಟ್ಟಿದ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಹೇಯ ಕೃತ್ಯವೊಂದು ಸಾಂಸ್ಕೃತಿಕ ನಗರಿ ಮೈಸೂರಿನ ಪ್ರತಿಷ್ಠಿತ ಬಡಾವಣೆಯೊಂದರಲ್ಲಿ ನಡೆದಿದೆ. ಪ್ರಕರಣವೀಗ ತಡವಾಗಿ ಬೆಳಕಿಗೆ ಬಂದಿದೆ.
ಸಂತ್ರಸ್ತೆಯ ಹೆತ್ತವರಿಬ್ಬರೂ ಕೆಲವು ವರ್ಷಗಳ ಹಿಂದೆಯೇ ಮೃತಪಟ್ಟಿದ್ದರು. ಬಾಲಕಿ ಇಬ್ಬರು ಸಹೋದರರು ಹಾಗೂ ಇಬ್ಬರು ಸಹೋದರಿಯರೊಂದಿಗೆ ಬೆಳೆದಿದ್ದಳು. ಸಹೋದರಿಯರಿಬ್ಬರಿಗೂ ಮದುವೆಯಾದ ಬಳಿಕ ಆಕೆ ಅಣ್ಣಂದಿರ ಆಶ್ರಯದಲ್ಲಿದ್ದಳು.
ಇಬ್ಬರು ಸಹೋದರರಲ್ಲಿ ಓರ್ವ ಕುಡಿತದ ಚಟ ಅಂಟಿಸಿಕೊಂಡಿದ್ದ. ಈತ ನಿತ್ಯ ಮನೆಗೆ ಕುಡಿದುಕೊಂಡು ಬಂದು, ಮನೆಯಲ್ಲಿದ್ದ ತಂಗಿ ಮೇಲೆ ಮೂರು ತಿಂಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇದೀಗ ಅಣ್ಣನಿಂದಲೇ ಅತ್ಯಾಚಾರಕ್ಕೊಳಗಾದ ಬಾಲಕಿ ಗರ್ಭಿಣಿಯಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆರೋಪಿ ಅಣ್ಣನ ವಿರುದ್ಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.