
ಕಾಮುಕ ಮಾವನಿಂದಲೇ ಸೊಸೆಯ ಮೇಲೆ ಅತ್ಯಾಚಾರ: ಮಗನಿಲ್ಲದ ವೇಳೆಯಲ್ಲಿ ಕೃತ್ಯ
Saturday, November 27, 2021
ನವದೆಹಲಿ: ಮಾವನೇ ಮಗ ಇಲ್ಲದ ವೇಳೆಯಲ್ಲಿ ಸೊಸೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಗುನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಸ್ಥಾನ ಮೂಲದ 21 ವರ್ಷದ ಯುವತಿ ಹಾಗೂ ಗುನಾ ಮೂಲದ 22ವರ್ಷದ ಯುವಕ ಇತ್ತೀಚೆಗೆ ವಿವಾಹವಾಗಿದ್ದರು. ಸಂತ್ರಸ್ತೆಯ ಪತಿ ಕಾಲೇಜು ವಿದ್ಯಾರ್ಥಿಯಾಗಿದ್ದು, ಮಗ ಕಾಲೇಜಿಗೆ ಹೋದ ಸಂದರ್ಭದಲ್ಲಿ ಮಾವನೇ ಸೊಸೆಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಗುನಾ ಜಿಲ್ಲೆಯ ಮೈನಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಯುವತಿ, ತನ್ನ ಪತಿ ಕಾಲೇಜಿಗೆ ಹೋದ ಸಂದರ್ಭದಲ್ಲಿ ಮಾವ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿದ್ದಾಳೆ. ಅತ್ಯಾಚಾರ ಎಸಗಿರುವ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಮಾವ ಬೆದರಿಕೆಯೊಡ್ಡಿದ್ದನೆಂದು ದೂರಿನಲ್ಲಿ ತಿಳಿಸಲಾಗಿದೆ.
ತನ್ನ ಮಾವನ ಬಳಿ ಹಲವಾರು ಅಕ್ರಮ ಶಸ್ತ್ರಾಸ್ತ್ರಗಳಿದ್ದು, ಆತ ತನ್ನ ಕುಟುಂಬದ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾರೆಂದು ಸೊಸೆ ದೂರಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಸ್ತಿ ತಕರಾರು ವಿಚಾರದಲ್ಲಿ ಮಾವ ಈ ಕೃತ್ಯ ಎಸಗಿರುವುದಾಗಿ ಶಂಕಿಸಲಾಗಿದೆ.
ಪ್ರಾಥಮಿಕ ತನಿಖೆ ನಡೆಸಿರುವ ಪೊಲೀಸರು, ಶಂಕಿತ ಆರೋಪಿಯನ್ನು ಇದುವರೆಗೂ ಬಂಧಿಸಿಲ್ಲ. ನಾವು ದೂರಿನ ಆಧಾರದ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ಇಳಿಸಿದ್ದಾರೆ.