
ಬೆಳ್ತಂಗಡಿ- 4ನೇ ತರಗತಿ ಬಾಲಕಿಗೆ ಅಶ್ಲೀಲ ಪೊಟೋ ತೋರಿಸಿ ಅತ್ಯಾಚಾರ
Monday, December 13, 2021
ಮಂಗಳೂರು: 4ನೇ ತರಗತಿಯ ಅಪ್ರಾಪ್ತ ಬಾಲಕಿಗೆ ಅಶ್ಲೀಲ ಚಿತ್ರ ತೋರಿಸಿ ಅತ್ಯಾಚಾರ ಎಸಗಿರುವ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಡಿಸೆಂಬರ್ 11ರಂದು ಮಧ್ಯಾಹ್ನ 2ಗಂಟೆ ಸುಮಾರಿಗೆ ಆರೋಪಿ ಜಯಾನಂದ ಎಂಬಾತನು ಅಪ್ರಾಪ್ತ ಬಾಲಕಿಯ ಮನೆಗೆ ಬಂದಿದ್ದಾನೆ. ಆ ಬಳಿಕ ಬಾಲಕಿಯನ್ನು ಬಲವಂತವಾಗಿ ಅಲ್ಲಿಯೇ ನಿರ್ಮಾಣವಾಗುತ್ತಿದ್ದ ಕಟ್ಟಡಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ತನ್ನ ಮೊಬೈಲ್ ಫೋನ್ ನಲ್ಲಿದ್ದ ಅಶ್ಲೀಲ ಚಿತ್ರಗಳನ್ನು ಆಕೆಗೆ ತೋರಿಸಿದ್ದಾನೆ.
ಇದರಿಂದ ಬೆದರಿದ ಬಾಲಕಿ ಜೋರಾಗಿ ಬೊಬ್ಬೆ ಹಾಕಿದ್ದಾಳೆ. ಆಗ ಆರೋಪಿ ಆಕೆಗೆ ಕೊಲೆ ಮಾಡುವೆನೆಂದು ಬೆದರಿಕೆಯೊಡ್ಡಿ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾನೆ ಎಂದು ಬಾಲಕಿಯ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.