ಮಂಗಳೂರು: 6ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಶಾಲಾ ವಾಹನ ಚಾಲಕ ಸೆರೆ
Friday, December 3, 2021
ಮಂಗಳೂರು: ನಗರದ ಶಾಲೆಯೊಂದರ 6ನೇ ತರಗತಿಯ ವಿದ್ಯಾರ್ಥಿನಿಗೆ ಶಾಲಾ ವಾಹನದ ಚಾಲಕನೇ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದ್ದು, ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ವಿದ್ಯಾರ್ಥಿನಿಯು ಮನೆಯಿಂದ ಶಾಲಾ ವಾಹನದಲ್ಲಿಯೇ ಶಾಲೆಗೆ ಬರುತ್ತಿದ್ದಳು. ಈ ಸಂದರ್ಭ ಬಾಲಕಿಗೆ ವಾಹನದ ಚಾಲಕನೇ ಲೈಂಗಿಕ ಕಿರುಕುಳ ನೀಡಿದ್ದಾನೆ. ಈತ ಕಿರುಕುಳ ನೀಡಿರುವ ಬಗ್ಗೆ ಬಾಲಕಿ ಹೆತ್ತವರೊಂದಿಗೆ ಹೇಳಿಕೊಂಡಿದ್ದಾಳೆ. ಇದೀಗ ಬಾಲಕಿಯ ಹೆತ್ತವರು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಪೊಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನವಾಗಿದೆ.