
SCDCC Sadhana award - ದ.ಕ. ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಸಾಧನಾ ಪ್ರಶಸ್ತಿ
Thursday, December 16, 2021
ದ.ಕ. ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಸಾಧನಾ ಪ್ರಶಸ್ತಿ
ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರಿ ಸಂಘಕ್ಕೆ ದೊರೆತ ಎಸ್ ಸಿಡಿಸಿಸಿ ಬ್ಯಾಂಕ್ ಸಾಧನ ಪ್ರಶಸ್ತಿ ದೊರೆತಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್( ಎಸ್ ಸಿಡಿಸಿಸಿ)ನ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರಿ ಸಂಘಕ್ಕೆ ಈ ಪ್ರಶಸ್ತಿ ನೀಡಿ ಗೌರವ ಪ್ರದಾನ ಮಾಡಲಾಯಿತು.
ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾದ ಜಗದೀಶ್‍ಚಂದ್ರ ಸೂಟರ್‌ಪೇಟೆ ಅವರು ಎಸ್ ಸಿಡಿಸಿಸಿ ಬ್ಯಾಂಕ್ ಸಾಧನ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಸ್ವೀಕರಿಸಿದರು.
ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ ಹಾಗೂ ಇತರ ನಿರ್ದೇಶಕರು, ಹಿರಿಯ ಸಹಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.