
ಸಮವಸ್ತ್ರ ಧರಿಸಿ ಫೋಟೋ ಶೂಟ್ ಮಾಡಿ ಎಡವಟ್ಟು: ಸಂಕಷ್ಟ ಎದುರಿಸುತ್ತಿರುವ ಮಹಿಳಾ ಪೊಲೀಸ್ ಅಧಿಕಾರಿ
Wednesday, December 8, 2021
ಕೋಯಿಕ್ಕೋಡ್: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಪೊಲೀಸ್ ಯೂನಿಫಾರ್ಮ್ ಧರಿಸಿ ಫೋಟೋಶೋಟ್ ಮಾಡಿರುವುದಕ್ಕೆ ಪೊಲೀಸ್ ವಲಯದಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ.
'ಸೇವ್ ದಿ ಡೇಟ್' ಎಂಬ ಟ್ಯಾಗ್ಲೈನ್ನೊಂದಿಗೆ ಕೆಲ ದಿನಗಳ ಹಿಂದೆ ಕೋಝಿಕ್ಕೋಡ್ ನಗರದ ಮಹಿಳಾ ಸಬ್ಇನ್ಸ್ಪೆಕ್ಟರ್ ಸಮವಸ್ತ್ರದಲ್ಲಿ ಫೋಟೋಶೂಟ್ ಮಾಡಿಕೊಂಡಿದ್ದಾರೆ. ಕೆಲ ದಿನಗಳ ಬಳಿಕ ಫೋಟೋಗಳು ತುಂಬಾ ವೈರಲ್ ಆಗಿದ್ದು, ಇದೀಗ ಈ ಫೋಟೊಗೆ ತೀವ್ರ ಟೀಕೆಗಳು ಕೇಳಿಬರುತ್ತಿವೆ.
2015 ರಲ್ಲಿ ಕೇರಳ ಡಿಜಿಪಿ ಆಗಿದ್ದ ಟಿ.ಪಿ.ಸೆನ್‌ಕುಮಾರ್ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಸಮವಸ್ತ್ರವನ್ನು ಧರಿಸಿರುವ ಪೋಟೋಗಳನ್ನು ಪೋಸ್ಟ್ ಮಾಡದಿರುವಂತೆ ಆದೇಶವನ್ನು ಹೊರಡಿಸಿದ್ದರು. ಅಲ್ಲದೆ, ಜಾಲತಾಣಗಳಲ್ಲಿ ಸಂವಹನ ನಡೆಸುವ ಸಂದರ್ಭ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದರು. ಇದೀಗ ಈ ಆದೇಶವನ್ನು ಉಲ್ಲಂಘಿಸಿ ಮಹಿಳಾ ಪೊಲೀಸ್ ಅಧಿಕಾರಿ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅವರು ಕಠಿಣ ಕ್ರಮ ಎದರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.