
ಐದರ ಬಾಲೆಯ ಮೇಲೆ ಅತ್ಯಾಚಾರ: ಆರೋಪಿ ಅಂದರ್
Wednesday, December 8, 2021
ಕೊಟ್ಟಿಗೆಹಾರ: ಐದರ ಬಾಲೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕಿಯ ತಾಯಿ ಈ ಬಗ್ಗೆ ಬಣಕಲ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಣಕಲ್ ಪೊಲೀಸರು ಕೋಳೂರು ಗ್ರಾಮದ ನಾರಾಯಣ ಎಂಬುವವನ್ನು ಬಂಧಿಸಿದ್ದಾರೆ. ಈತನ ಮೇಲೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.