ಮಂಗಳೂರಿನಲ್ಲಿ ಬಾಲಕಿ ಮೇಲೆ ತಂದೆಯಿಂದಲೇ ಲೈಂಗಿಕ ದೌರ್ಜನ್ಯ- ಈತ ಕದ್ರಿ ಸ್ಟೇಷನ್ ರೌಡಿಶೀಟರ್!
Wednesday, December 1, 2021
ಮಂಗಳೂರು; ಮಂಗಳೂರಿನಲ್ಲಿ ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ಕಿರುಕುಳ ನಡೆದ ಬಗ್ಗೆ ದೂರು ದಾಖಲಾಗಿದೆ.
ಒಂದನೆ ತರಗತಿ ಕಲಿಯುತ್ತಿರುವ ಮಗಳ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಗಳಿಗೆ ಈತ ದೌರ್ಜನ್ಯ ಎಸಗುತ್ತಿರುವುದನ್ನು ವಿರೋಧಿಸಿದ ತನ್ನ ತಾಯಿಗೂ ಹಲ್ಲೆ ನಡೆಸಿದ್ದಾನೆ.
ಈತ ಕದ್ರಿ ಪೊಲೀಸ್ ಠಾಣೆ ಯಲ್ಲಿ ರೌಡಿಶೀಟರ್ ಆಗಿದ್ದು ಜೊಮ್ಯಾಟೊದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಪೊಲೀಸರು ಪ್ರಕರಣ ದಾಖಲಿಸಿ ಈತನನ್ನು ಬಂಧಿಸಿದ್ದಾರೆ.