ಉಡುಪಿ : ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು
Monday, December 27, 2021
ಮಂಗಳೂರು: ಉಡುಪಿ ನಗರದ ಖಾಸಗಿ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ್ ನಿವಾಸಿ ಸರಸ್ವತಿ(16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಈಕೆ ಹೆತ್ತವರೊಂದಿಗೆ ಉಡುಪಿಯ ಪರ್ಕಳದ ದೇವಿನಗರದಲ್ಲಿ ವಾಸಿಸುತ್ತಿದ್ದಳು. ಉಡುಪಿಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ ಕೆಲಸಕ್ಕೆ ತೆರಳಿದ ವೇಳೆ ಸರಸ್ವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.