-->
UDUPI: ಯುವತಿಯನ್ನಿಟ್ಟುಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಆರೋಪ; ಯುವಕ ಪೊಲೀಸ್ ವಶಕ್ಕೆ

UDUPI: ಯುವತಿಯನ್ನಿಟ್ಟುಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಆರೋಪ; ಯುವಕ ಪೊಲೀಸ್ ವಶಕ್ಕೆ

ಉಡುಪಿ: ಯುವತಿಯನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬೆದರಿಕೆ ಒಡ್ಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಶಂಕರ ನಾರಾಯಣ ಪೊಲೀಸರು ಬಂಧಿಸಿದ್ದಾರೆ. 

ಬಂಧಿತ ಆರೋಪಿ ರಂಜಿತ್ ಎಸ್. ಹೆಂಗವಳ್ಳಿ (26) ಹನಿಟ್ರ್ಯಾಪ್ ನಡೆಸಿ ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದನೆಂದು ವ್ಯಕ್ತಿಯೊಬ್ಬರು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಡಿ.17ರಂದು ಸಂಜೆ ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಪೊಲೀಸರು, ಹೆಚ್ಚಿನ ತನಿಖೆಗೆ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. 

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Ads on article

Advertise in articles 1

advertising articles 2

Advertise under the article