
ಬೈಕಂಪಾಡಿ ಮೀನು ಸಂಸ್ಕರಣಾ ಘಟಕದಲ್ಲಿ ಅನಿಲ ಸೋರಿಕೆ: ಅಸ್ವಸ್ಥ 20 ಕಾರ್ಮಿಕರು ಆಸ್ಪತ್ರೆಗೆ ದಾಖಲು
Tuesday, January 11, 2022
ಮಂಗಳೂರು: ನಗರದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಮೀನು ಸಂಸ್ಕರಣಾ ಘಟಕವೊಂದರಲ್ಲಿ ಅನಿಲ ಸೋರಿಕೆಯಾಗಿ 20 ಮಂದಿ ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಂದು ನಡೆದಿದೆ.
ಬೈಕಂಪಾಡಿಯ ಎವರೆಸ್ಟ್ ಮೀನು ಸಂಸ್ಕರಣಾ ಘಟಕದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಘಟಕದಲ್ಲಿ 80 ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು. ಇವರಲ್ಲಿ 20 ಮಂದಿ ಕಾರ್ಮಿಕರಿಗೆ ಉಸಿರಾಟದ ತೊಂದರೆಯುಂಟಾಗಿ ಅಸ್ವಸ್ಥರಾಗಿದ್ದಾರೆ.
ಅಸ್ವಸ್ಥರನ್ನು ನಗರದ ಸುರತ್ಕಲ್ ನಲ್ಲಿರುವ ಶ್ರೀನಿವಾಸ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಗ್ನಿಶಾಮಕ ದಳವು ಕಾರ್ಯಾಚರಣೆ ನಡೆಸುತ್ತಿದ್ದು, ಪಣಂಬೂರು ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.