
ಸಾಕುಮಗಳನ್ನೇ ಅತ್ಯಾಚಾರಗೈದ ಕಾಮುಕನಿಗೆ 20 ವರ್ಷಗಳ ಕಠಿಣ ಶಿಕ್ಷೆ!
Wednesday, January 26, 2022
ಶಿರಸಿ: ಸಾಕುಮಗಳನ್ನೇ ಅತ್ಯಾಚಾರಗೈದ ಕಾಮುಕನಿಗೆ ಜಿಲ್ಲಾ ಹೆಚ್ಚುವರಿ ಹಾಗೂ ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ 77,500 ರೂ. ದಂಡ ವಿಧಿಸಿ ಆದೇಶಿಸಿದೆ.
ಶಿರಸಿಯ ಗುಲಾಬ್ ಚಂದ್ ಚಿಮಾಲಾಲ್ ಷಾ(38) ಶಿಕ್ಷೆಗೊಳಗಾದ ಆರೋಪಿ.
ಆರೋಪಿ ತನ್ನ ಸಾಕುಮಗಳ ಮೇಲೆಯೇ ಅತ್ಯಾಚಾರಗೈದಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿರುವ ಪೊಲೀಸ್ ಇನ್ ಸ್ಪೆಕ್ಟರ್ ರಾಮಚಂದ್ರ ನಾಯಕ್ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಶಿವಾಜಿ ಅನಂತ ನಾಲ್ವಾಡಿ ಎಂಟು ತಿಂಗಳಲ್ಲಿ ವಿಚಾರಣೆ ನಡೆಸಿ ತೀರ್ಪು ನೀಡಿದ್ದಾರೆ. ಈ ಬಗ್ಗೆ ಸುಭಾಷ್ ಖೈರನ್ ವಾದಿಸಿದ್ದರು.