
ಹೆಬ್ರಿ: ನೇಣಿಗೆ ಕೊರಳೊಡ್ಡಿ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
Monday, January 17, 2022
ಉಡುಪಿ: ಇಲ್ಲಿನ ಹೆಬ್ರಿಯ ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಕುಣಿಕೆಗೆ ಕೊರಳೊಡ್ಡಿರುವ ಘಟನೆ ನಡೆದಿದೆ.
ಅನ್ವಿತ್ ಶೆಟ್ಟಿ (14) ಆತ್ಮಹತ್ಯೆಗೈದಿರುವ ವಿದ್ಯಾರ್ಥಿ. ಅನ್ವಿತ್ ಶೆಟ್ಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದರಿಂದ ಮನನೊಂದು ಆತ್ಮಹತ್ಯೆ ಮಾಡಿರುವುದಾಗಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತ ಮನೆಯ ಬಚ್ಚಲು ಮನೆಯಲ್ಲಿರುವ ಕಬ್ಬಿಣದ ರಾಡ್‌ಗೆ ಚೂಡಿದಾರ್ ನ ವೇಲ್‌ನಿಂದ ನೇಣು ಬಿಗಿದುಕೊಂಡಿದ್ದಾನೆ. ತಕ್ಷಣ ಆತನ ಪೋಷಕರು ಹೆಬ್ರಿ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.