
ಬ್ರಹ್ಮಾವರ: ಅಪಘಾತದ ಗಂಭೀರ ಗಾಯಾಳು ಮಹಿಳೆ ಮೃತ್ಯು
Thursday, January 20, 2022
ಬ್ರಹ್ಮಾವರ: ಬ್ರಹ್ಮಾವರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ಮಾಡುತ್ತಿದ್ದ ಮಹಿಳೆಯೋರ್ವರು ಇಂದು ಮೃತಪಟ್ಟಿದ್ದಾರೆ.
ಸರಿತಾ ಪಿಂಟೊ(38) ಮೃತ ಮಹಿಳೆ.
ಕೆಲ ದಿನಗಳ ಹಿಂದಷ್ಟೇ ಕುವೈಟ್ ನಿಂದ ಆಗಮಿಸಿದ್ದ ಸರಿತಾ ಪಿಂಟೊ ಅವರು ಪತಿ ಅನಿಲ್ ಪಿಂಟೊ ಹಾಗೂ 3 ವರ್ಷದ ಮಗನೊಂದಿಗೆ ಕೋಟದಲ್ಲಿರುವ ತವರು ಮನೆಗೆ ದ್ವಿಚಕ್ರ ವಾಹನದಲ್ಲಿ ಸೋಮವಾರ ತೆರಳುತ್ತಿದ್ದರು. ಈ ಸಂದರ್ಭ ಬ್ರಹ್ಮಾವರದಲ್ಲಿ ನಡೆದಿರುವ ರಸ್ತೆ ಅಪಘಾತದಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಘಟನೆಯಲ್ಲಿ ಅವರ ಪತಿ ಹಾಗೂ ಪುತ್ರ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರು.
ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡಿದ್ದ ಸರಿತಾರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 2 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ಸರಿತಾ ಇಂದು ನಿಧನರಾಗಿದ್ದಾರೆ. ಮೃತರು ಸಹೋದರ ಧರ್ಮಗುರು, ತಾಯಿ, ಪತಿ, ಓರ್ವ ಪುತ್ರಿ, ಓರ್ವ ಪುತ್ರ , ಇಬ್ಬರು ಸಹೋದರಿಯರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಗುರುವಾರ ಜ .20 ರಂದು ಸಂಜೆ 4 ಕ್ಕೆ ಉದ್ಯಾವರದ ಸಂತ ಫ್ರಾನ್ಸಿಸ್ ಚರ್ಚ್ ನಲ್ಲಿ ನಡೆಯಲಿದೆ.