Job in Hassan ZP- ಹಾಸನ ಜಿ.ಪಂ.ನಲ್ಲಿ ಉದ್ಯೋಗವಕಾಶ: ಆನ್ಲೈನ್ ಅರ್ಜಿ ಸಲ್ಲಿಕೆಗೆ ಕೆಲವೇ ದಿನ ಬಾಕಿ
ಹಾಸನ ಜಿ.ಪಂ.ನಲ್ಲಿ ಉದ್ಯೋಗವಕಾಶ: ಆನ್ಲೈನ್ ಅರ್ಜಿ ಸಲ್ಲಿಕೆಗೆ ಕೆಲವೇ ದಿನ ಬಾಕಿ
ಹಾಸನ ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ ಇದ್ದು, ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಕೆಗೆ ಇನ್ನು ಕೆಲವೇ ದಿನ ಬಾಕಿ ಇದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ನರೇಗ) ಯೋಜನೆಯಡಿ ಕೂಲಿಕಾರರನ್ನು ಸಂಘಟಿಸಿ ಕಾಮಗಾರಿಗಳಲ್ಲಿ ತೊಡಗಿಸುವ ಮೂಲಕ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಲು ಮತ್ತು ಅನುಷ್ಠಾನಗೊಳಿಸುವ ಕಾಮಗಾರಿಗಳ ಕಾರ್ಯಸ್ಥಳದ ಮೇಲ್ವಿಚಾರಣೆ ಮಾಡಲು 'ಬೇರ್ ಫುಟ್ ಟೆಕ್ನಿಷನ್' ಬಿಎಫ್ಟಿ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಹಾಕಬಹುದಾಗಿದೆ.
ಅರ್ಹ ಅಭ್ಯರ್ಥಿಗಳು NICಯ ಹಾಸನ ಜಿಲ್ಲಾ ವೆಬ್ ಸೈಟ್ www.hassan.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರಗಳು ಹೀಗಿವೆ
ಹುದ್ದೆ ಹೆಸರು BFT
ಹುದ್ದೆಯ ಸಂಖ್ಯೆ - 16
ವಿದ್ಯಾರ್ಹತೆ: ಎಸೆಸೆಲ್ಸಿ (SSLC)
ವಯೋಮಿತಿ: ಗರಿಷ್ಠ 45 ವರ್ಷ ಕನಿಷ್ಠ 18 ವರ್ಷ
ಅನುಭವ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರ ನಾಗಿರಬೇಕು ಅಂದರೆ ಮೂರು ವರ್ಷಗಳಲ್ಲಿ ಕನಿಷ್ಠ 2 ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಯೋಜನೆಯಡಿ ಕೂಲಿಕಾರರಾಗಿ ಕೆಲಸ ಮಾಡಿರಬೇಕು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭದ ದಿನಾಂಕ 06/1/2022
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20/1/2022
ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಲಿಂಕ್ ಒತ್ತಿರಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿರಿ