Police Dept Recruitment- ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ನೇಮಕಾತಿ
ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ನೇಮಕಾತಿ
ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಿಎಆರ್ / ಡಿಎಆರ್ ಮತ್ತು ಸೇವೆಯಲ್ಲಿರುವವರು ಮಿಕ್ಕುಳಿದ ಮತ್ತು ಸ್ಥಳೀಯ ವೃಂದದ ಖಾಲಿ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡುವ ಕುರಿತು ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ.
ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಈ ಮೇಲಿನ ಹುದ್ದೆಗಳ ನೇಮಕಾತಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು. ಖುದ್ದಾಗಿ ಯಾ ಅಂಚೆ ಮೂಲಕ ಅಥವಾ ಪ್ರತ್ಯೇಕವಾಗಿ ಸಲ್ಲಿಸುವ ಯಾವುದೇ ಅರ್ಜಿಯನ್ನು ನೇಮಕಾತಿಗೆ ಪರಿಗಣಿಸುವುದಿಲ್ಲ
ಸಾಮಾನ್ಯ ವರ್ಗ ಮತ್ತು ಇತರ ಹಿಂದುಳಿದ ವರ್ಗಗಳಿಗೆ ರೂ. 500/-ರುಪಾಯಿ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ. 250/- ಶುಲ್ಕ ಇರುತ್ತದೆ.
ಅರ್ಜಿ ಶುಲ್ಕವನ್ನು ಸಮೀಪದ HDFC ಬ್ಯಾಂಕಿನ ಶಾಖಾ ಕಚೇರಿಯಲ್ಲಿ ಪಾವತಿ ಮಾಡಿ ಅಭ್ಯರ್ಥಿ ಪ್ರತಿಯನ್ನು ತಮ್ಮಲ್ಲಿ ಇಟ್ಟುಕೊಳ್ಳತಕ್ಕದ್ದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 27 2002
ಅರ್ಜಿಯನ್ನು ಈ ಕೆಳಗಿನ ವೆಬ್ಸೈಟ್ ಲಿಂಕ್ ಮೂಲಕ ಸಲ್ಲಿಸಬಹುದಾಗಿದೆ. ಅಭ್ಯರ್ಥಿಯು ಶುಲ್ಕ ಪಾವತಿಸಿದ ಎರಡು ದಿನಗಳ ನಂತರ ಪುನಃ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.. ಈ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿಯ ಪ್ರಿಂಟ್ ಪ್ರತಿಯನ್ನು ತೆಗೆದಿಟ್ಟುಕೊಳ್ಳಬೇಕು.
ಅರ್ಜಿ ಪ್ರತಿ ಮತ್ತು ಅರ್ಜಿ ಸಂಖ್ಯೆಯ ಮುಂದಿನ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಅಂಗಗಳಿಗೆ ಅವಶ್ಯವಾಗಿ ಬೇಕಾಗಿರುತ್ತದೆ.
https://recruitment.ksp.gov.in
ಮತ್ತೊಮ್ಮೆ ಅರ್ಜಿ ಪ್ರತಿಯನ್ನು ಪಡೆದುಕೊಳ್ಳಲು-
https://recruitment.ksp.gov.in ನಲ್ಲಿ Recruitment / Online Recruitment Application / My Application