
ಕುಷ್ಟಗಿಯಲ್ಲಿ ಅಪ್ರಾಪ್ತೆ ನಾಪತ್ತೆ: ಗ್ರಾಮದ ಯುವಕ ಅಪರಹರಣಗೈದ ಶಂಕೆ; ದೂರು
Thursday, January 13, 2022
ಕುಷ್ಟಗಿ: ಕುಷ್ಟಗಿ ತಾಲೂಕಿನ ಕಲಾಲಬಂಡಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಅಪಹರಿಸಿರುವ ಬಗ್ಗೆ ಆಕೆಯ ಪಾಲಕರು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಓದುತ್ತಿದ್ದ ವಿದ್ಯಾರ್ಥಿನಿ ಕಳೆದ ಡಿ.25 ರಂದು ಮನೆಯಿಂದ ನಾಪತ್ತೆಯಾಗಿದ್ದಳು. ಬಾಲಕಿಯ ಪತ್ತೆಗೆ ಪಾಲಕರು ಸಾಕಷ್ಟು ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಕುಷ್ಟಗಿ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.
ಬಾಲಕಿ ಮನೆಯಿಂದ ನಾಪತ್ತೆಯಾದಾಗ ಹಸಿರು ಬಣ್ಣದ ಚೂಡಿದಾರ ಧರಿಸಿದ್ದಳು. 4’6 ಎತ್ತರ, ದುಂಡು ಮುಖ ಅಗಲ ಕಣ್ಣು, ಗೋಧಿ ಮೈ ಬಣ್ಣ ಹೊಂದಿದ್ದು ಬಾಲಕಿ ಪತ್ತೆಗೆ ಕ್ರಮ ಕೈಗೊಳ್ಳಲು ಸ್ಥಳೀಯ ಠಾಣೆಗೆ ಮಾಹಿತಿ ನೀಡಿದ್ದಾರೆ.
ಬಾಲಕಿಯ ಹೆತ್ತವರು ಗ್ರಾಮದ ರಾಜೇಸಾಬ್ ಬಡೇಸಾಬ ಮಾಲಿಪಾಟೀಲ ಯುವಕನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪಾಲಕರು ದೂರು ದಾಖಲಿಸಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.