
ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಬಸ್ ಚಾಲಕ ಬಂಧನ
Sunday, January 30, 2022
ಮಂಗಳೂರು: ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಸ್ ಚಾಲಕನೋರ್ವನನ್ನು ಬಂಧಿಸಿರುವ ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮೂಲದ, ಸದ್ಯ ಮಂಗಳೂರಿನಲ್ಲಿ ಬಸ್ ಚಾಲಕನಾಗಿರುವ ದಯಾನಂದ(32) ಬಂಧಿತ ಆರೋಪಿ.
ಆರೋಪಿ ದಯಾನಂದ ನಗರದ ಸಿಟಿ ಬಸ್ಸೊಂದರಲ್ಲಿ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ. ಈತ 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಬಾಲಕಿಯ ಪೋಷಕರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.