
ಹೈಸ್ಕೂಲ್ ವಿದ್ಯಾರ್ಥಿನಿ ಮೇಲೆ ಕಾಮುಕನ ಅಟ್ಟಹಾಸ: ದೂರು ದಾಖಲು
Tuesday, January 11, 2022
ಶಿವಮೊಗ್ಗ: ಕಾಮುಕನೋರ್ವನು ಓಮ್ನಿ ಕಾರ್ ನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ದೂರು ದಾಖಲಾಗಿದೆ.
ಭದ್ರಾವತಿ ತಾಲೂಕಿನ ಗ್ರಾಮವೊಂದರ ವಿದ್ಯಾರ್ಥಿನಿ ಇಂದು ಬೆಳಗ್ಗೆ ಶಾಲೆಗೆ ಹೋಗುವಾಗ ಈ ಕಾಮುಕ ಮಾರುತಿ ಓಮಿನಿ ಕಾರಿನಲ್ಲಿ ಬಂದಿದ್ದಾನೆ. ಬಳಿಕ ವಿದ್ಯಾರ್ಥಿನಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದು ದುಷ್ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.
ವಿದ್ಯಾರ್ಥಿನಿಯನ್ನು ಕಾರಿನಲ್ಲಿ ತರೀಕೆರೆವರೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಇದರಿಂದ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ಪ್ರಜ್ಞೆ ಬಂದ ಬಳಿಕ ವಿದ್ಯಾರ್ಥಿನಿಯೇ ಬಸ್‌ನಲ್ಲಿ ತನ್ನ ಮನೆಗೆ ವಾಪಸ್ ಆಗಿದ್ದಾಳೆ. ಪೋಷಕರಿಗೆ ಆಕೆಯ ಸ್ಥಿತಿಯನ್ನು ಕಂಡು ಅನುಮಾನ ಬಂದಿದೆ. ಈ ಬಗ್ಗೆ ವಿಚಾರಿಸಿದಾಗ, ಆಕೆ ಬಾಯಿ ಬಿಟ್ಟಿದ್ದಾಳೆ. ತಕ್ಷಣ ಮನೆಯವರು ಆಕೆಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ದೂರು ದಾಖಲಿಸಿದ್ದಾರೆ.