
ವಿಶೇಷ ಚೇತನೆ ಬಾಲಕಿಯ ಮೇಲೆ ಅತ್ಯಾಚಾರ: ಗುಪ್ತಾಂಗಕ್ಕೆ ಹರಿತವಾದ ಆಯುಧದಿಂದ ಇರಿದು ವಿಕೃತಿ ಮೆರೆದ ದುಷ್ಕರ್ಮಿಗಳು
Friday, January 14, 2022
ಜೈಪುರ: ರಾಜಸ್ತಾನದ ಅಲ್ವಾರ್ ಜಿಲ್ಲೆಯಲ್ಲಿ 16 ವರ್ಷದ ವಿಶೇಷ ಚೇತನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ಹರಿತವಾದ ಆಯುಧದಿಂದ ಇರಿದು, ಸೇತುವೆಯಿಂದ ಕೆಳಗೆ ಎಸೆದಿರುವ ಅಮಾನವೀಯ ಘಟನೆ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂತ್ರಸ್ತೆ ಬಾಲಕಿಯು ವಿಶೇಷ ಚೇತನಳಾಗಿದ್ದಾಳೆ. ಈ ವಾರದ ಆರಂಭದಲ್ಲಿ ಅಲ್ವಾರ್‌ನ ತಿಜಾರಾ ಮೇಲ್ಸೇತುವೆಯಡಿಯಲ್ಲಿ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದಳು. ಮಂಗಳವಾರ ಆಕೆಯನ್ನು ಅಲ್ವಾರ್ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ವೈದ್ಯರ ಭಾರೀ ಪ್ರಯತ್ನಗಳ ಮಧ್ಯೆಯೂ ಆಕೆ ಚೇತರಿಸಿಕೊಳ್ಳದಿದ್ದಾಗ ಹೆಚ್ಚಿನ ಚಿಕಿತ್ಸೆಗೆಂದು ಆಕೆಯನ್ನು ಬುಧವಾರ ಜೈಪುರದ ಜೆಕೆ ಲಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸುಮಾರು ಎರಡುವರೆ ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ಬಳಿಕ, ಸಂತ್ರಸ್ತೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಅಲ್ಲದೆ, ಆಕೆಯ ಗುಪ್ತಾಂಗದಲ್ಲಿ ಇರಿಯಲಾಗಿದ್ದ ಹರಿತವಾದ ಆಯುಧವನ್ನು ವೈದ್ಯರು ಹೊರತೆಗೆದಿದ್ದಾರೆ. ಆಯುಧದಿಂದ ಆಕೆಯ ಆಂತರಿಕ ಅಂಗಗಳಿಗೆ ಗಂಭೀರವಾದ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.
ಸದ್ಯದ ಮಾಹಿತಿಯ ಪ್ರಕಾರ, ಬಾಲಕಿಯ ಗುಪ್ತ ಅಂಗಗಳು ಭಾರೀ ಹಾನಿಗೊಳಗಾಗಿದ್ದು, ಪ್ರಸ್ತುತ ಆಕೆಯನ್ನು ಜೆಕೆ ಲೋನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.