
ಸ್ನಾನ ಮಾಡುತ್ತಿರುವ ವೀಡಿಯೋ ಚಿತ್ರೀಕರಣ ಮಾಡಿ ಬ್ಲ್ಯಾಕ್ ಮೇಲ್: ಅತ್ತಿಗೆ ಮೇಲೆ ಮೈದುನನಿಂದಲೇ ಅತ್ಯಾಚಾರ
Thursday, January 20, 2022
ಪುಣೆ: ಸ್ನಾನ ಮಾಡುತ್ತಿದ್ದ ವೇಳೆ ರಹಸ್ಯ ಕ್ಯಾಮರಾ ಇರಿಸಿ ಅತ್ತಿಗೆಯ ವೀಡಿಯೋ ಚಿತ್ರೀಕರಣ ಮಾಡಿ ಬಳಿಕ ಆಕೆಯನ್ನು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿರುವ ಆರೋಪದಲ್ಲಿ 25 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಪುಣೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪರ್ಭಾನಿ ಜಿಲ್ಲೆಯ ಆರೋಪಿ ಯುವಕನ ವಿರುದ್ಧ ಮಹಿಳೆ ನೀಡಿರುವ ದೂರಿನನ್ವಯ ಹಿಂಜೆವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಅತ್ತಿಗೆ ಸ್ನಾನ ಮಾಡುತ್ತಿದ್ದಾಗ ಆರೋಪಿ ಆಕೆಗೆ ತಿಳಿಯದಂತೆ ವೀಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾನೆ. ಬಳಿಕ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಬೇಕು. ಇಲ್ಲದಿದ್ದರೆ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ್ದಾನೆ. ಆದರೆ ಅತ್ತಿಗೆ ಲೈಂಗಿಕ ಸಂಪರ್ಕಕ್ಕೆ ವಿರೋಧ ವ್ಯಕ್ತಪಡಿಸಿದಾಗ ಮೈದುನ ತನ್ನ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿರುವುದಾಗಿ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.
ಈ ಘಟನೆ ಕಳೆದ ತಿಂಗಳು ನಡೆದಿದ್ದು, ಆತ ಪದೇಪದೇ ಕಿರುಕುಳ ನೀಡಲು ಆರಂಭಿಸಿದಾಗ ಘಟನೆ ಬಗ್ಗೆ ಮಹಿಳೆ ಪತಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಪೊಲೀಸರಿಗೆ ದೂರು ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಬೆನ್ನಲ್ಲೇ ಆರೋಪಿ ನಾಪತ್ತೆಯಾಗಿದ್ದನೆ. ತಕ್ಷಣ ಆತನನ್ನು ಪತ್ತೆಹಚ್ಚಿ ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.