
ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ದೇವಾಲಯದ ಪೂಜಾರಿ ಅರೆಸ್ಟ್
Wednesday, January 26, 2022
ಚಾಮರಾಜನಗರ: ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ದೇವಾಲಯದ ಪೂಜಾರಿಯೋರ್ವನನ್ನು ಬಂಧಿಸಿರುವ ಘಟನೆ ತಾಲೂಕಿನ ಬೇಡಗುಳಿ ಗ್ರಾಮದಲ್ಲಿ ನಡೆದಿದೆ.
ಬೇಡಗುಳಿಯ ದೇವಾಲಯದ ಪೂಜಾರಿಯಾಗಿದ್ದ ರವಿ (23) ಬಂಧಿತ ಆರೋಪಿ. ಈತ 17 ವರ್ಷದ ಬಾಲಕಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ. ಬಾಲಕಿ ಏಳು ತಿಂಗಳ ಗರ್ಭಿಣಿಯಾಗಿದ್ದು, ಆಕೆಯನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ.
ಗ್ರಾಪಂ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಕೋವಿಡ್ ಸಂಬಂಧ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದಾಗ, ಬಾಲಕಿ ಗರ್ಭಿಣಿಯಾಗಿರುವುದನ್ನು ಗಮನಿಸಿ ವಿಚಾರಣೆ ನಡೆಸಿದ್ದಾರೆ. ಆಗ ಆಕೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಪೊಕ್ಸೊ ಕಾಯ್ದೆಯಡಿ ಬಂಧನ ಮಾಡಲಾಗಿದೆ.