
ಮಂಗಳೂರು: ಕಾರು ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಾಘಾತದಿಂದ ಮೃತ್ಯು
Wednesday, February 2, 2022
ಮಂಗಳೂರು: ಕಾರು ಚಲಾಯಿಸುತ್ತಿದ್ದಾಗಲೇ ತೀವ್ರ ಹೃದಯಾಘಾತವಾಗಿ ಮೃತಪಟ್ಟ ಘಟನೆಯೊಂದು ನಗರದ ಮಂಗಳಾದೇವಿಯಲ್ಲಿ ನಡೆದಿದೆ.
ಮಂಗಳೂರು ನಗರದ ಪಾಂಡೇಶ್ವರ ನಿವಾಸಿ ಮೊಹಮ್ಮದ್ ಶರೀಫ್(57) ಹೃದಯಾಘಾತದಿಂದ ಮೃತಪಟ್ಟವರು.
ನಗರದಲ್ಲಿ ಟ್ಯಾಕ್ಸಿ ಚಾಲಕರಾಗಿ ವೃತ್ತಿ ನಿರ್ವಹಿಸುತ್ತಿದ್ದ ಮೊಹಮ್ಮದ್ ಶರೀಫ್ ಮಂಗಳಾದೇವಿಯ ಬಳಿ ಕಾರು ಚಲಾಯಿಸಿಕೊಂಡು ಬರುತ್ತಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದೆ. ಆದ್ದರಿಂದ ತಕ್ಷಣ ಅವರಿಗೆ ಕಾರು ನಿಲ್ಲಿಸಲಾಗದೆ ಅಲ್ಲಿಯೇ ಇದ್ದ ಟೆಂಪೊವೊಂದಕ್ಕೆ ಢಿಕ್ಕಿ ಹೊಡೆದಿದೆ. ಸ್ವಲ್ಪದರಲ್ಲಿ ಕಾರು, ಬಸ್ ಹಾಗೂ ದ್ವಿಚಕ್ರಕ್ಕೆ ಢಿಕ್ಕಿ ಹೊಡೆಯುವುದು ತಪ್ಪಿದೆ.
ಕಾರಿನಲ್ಲಿ ಮೂರ್ಛೆ ತಪ್ಪಿದ್ದ ಮೊಹಮ್ಮದ್ ಶರೀಫ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ದಾರಿ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.