ಮಂಡ್ಯ: ಪ್ರೇಮಿಗಳಾಗಿದ್ದ ಪಿಯುಸಿ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಆತ್ಮಹತ್ಯೆ
Sunday, February 6, 2022
ಮಂಡ್ಯ: ಪಿಯುಸಿ ವಿದ್ಯಾರ್ಥಿಗಳಾಗಿದ್ದ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಮಳವಳ್ಳಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಗ್ರಾಮ ನಿವಾಸಿ ರಶ್ಮಿ(17) ಹಾಗೂ ಆಲದಹಳ್ಳಿ ಗ್ರಾಮ ನಿವಾಸಿ ಶಶಾಂಕ್ ಗೌಡ(18) ಆತ್ಮಹತ್ಯೆ ಮಾಡಿಕೊಂಡವರು.
ಈ ಪ್ರೇಮಿಗಳಿಬ್ಬರೂ ನಗರದ ಶಾಂತಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಯ ಬಲೆಗೆ ಬಿದ್ದಿದ್ದರು ಎನ್ನಲಾಗಿದೆ.
ಆದರೆ ಅದೇನಾಯ್ತೋ ಗೊತ್ತಿಲ್ಲ ರಶ್ಮಿ ಶನಿವಾರ ಸಂಜೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪರಿಣಾಮ ತೀವ್ರವಾಗಿ ಮನನೊಂದ ಶಶಾಂಕ್ ಗೌಡ ಶನಿವಾರ ರಾತ್ರಿ ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.