ಮಂಗಳೂರು ಏರ್ಪೋರ್ಟ್ ನಲ್ಲಿ 36.54 ಲಕ್ಷ ರೂ. ಮೌಲ್ಯದ ಚಿನ್ನ ಸೀಝ್
Saturday, March 19, 2022
ಮಂಗಳೂರು: ದೇಹದೊಳಗೆ ಮರೆಮಾಚಿ ಸಾಗಿಸುತ್ತಿದ್ದ ಅಕ್ರಮ ಸಾಗಾಟದ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಸೀಝ್ ಮಾಡಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದ್ದರು. ಆಗ ಆತ ದೇಹದೊಳಗಿರಿಸಿ ಚಿನ್ನ ಸಾಗಾಟ ಮಾಡಿರುವುದು ಪತ್ತೆಯಾಗಿದೆ.
ಈತ ಚಿನ್ನವನ್ನು ಪೇಸ್ಟ್ ನೊಳಗೆ ಇಟ್ಟು ಉಂಡೆಯ ರೂಪದಲ್ಲಿ ಸಾಗಾಟ ಮಾಡುತ್ತಿದ್ದ. ಈತನಿಂದ ಕಸ್ಟಮ್ಸ್ ಅಧಿಕಾರಿಗಳು 24 ಕ್ಯಾರೆಟ್ ನ 706 ಗ್ರಾಂ ತೂಕದ 36.54 ಲಕ್ಷ ರೂ. ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ.