-->
ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪ್ರಾಪ್ತರು ಸೇರಿದಂತೆ 8ಮಂದಿಯ ಬಂಧನ

ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪ್ರಾಪ್ತರು ಸೇರಿದಂತೆ 8ಮಂದಿಯ ಬಂಧನ

ತಮಿಳುನಾಡು: ಪುಂಡರ ಗುಂಪೊಂದು ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪ್ರಾಪ್ತರು ಸೇರಿದಂತೆ 8ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನಲ್ಲಿ 22 ವಯಸ್ಸಿನ ದಲಿತ ಯುವತಿಯೊಬ್ಬಳನ್ನು ನಾಲ್ವರು ಅಪ್ರಾಪ್ತರು ಸೇರಿದಂತೆ 8 ಮಂದಿ ಕೆಲವು ತಿಂಗಳಿನಿಂದ ಗ್ಯಾಂಗ್​ರೇಪ್ ನಡೆಸಿದ್ದರು. ಮಾತ್ರವಲ್ಲ, ಅತ್ಯಾಚಾರದ ದೃಶ್ಯವನ್ನು ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ ಮತ್ತೆ ಮತ್ತೆ ದೌರ್ಜನ್ಯ ಎಸಗಿದ್ದಾರೆ. 

ಈ ಸಂಬಂಧ ಯುವತಿ ನೀಡಿರುವ ದೂರಿನನ್ವಯ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಐಟಿ ಕಾಯ್ದೆ, ಎಸ್​ಸಿ-ಎಸ್​ಟಿ ಕಾಯ್ದೆ ಅನ್ವಯವೂ ಪ್ರಕರಣ ದಾಖಲಿಸಿಕೊಂಡು ಅತ್ಯಾಚಾರ ಕೇಸ್ ಹಾಕಿ ಎಫ್​ಐಆರ್ ದಾಖಲು ಮಾಡಿದ್ದಾರೆ. 

Ads on article

Advertise in articles 1

advertising articles 2

Advertise under the article