
ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕ ಅಂದರ್
Thursday, March 3, 2022
ಸಾಗರ: ಪ್ರಾಥಮಿಕ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಾಳಗೊಪ್ಪ ಹೋಬಳಿ ಮರತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ ಬಂಧಿತ ಆರೋಪಿ.
ಈಕಾಮುಕ ಶಿಕ್ಷಕ ಶಾಲೆಯಲ್ಲಿ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಪಾಲಕರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ತಡರಾತ್ರಿ ಪೊಲೀಸರು ಪೊಕ್ಸೊ ಪ್ರಕರಣದಡಿಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಿಕ್ಷಣ ಇಲಾಖೆಯು ಚಂದ್ರಶೇಖರ್ ನನ್ನು ಸೇವೆಯಿಂದ ಅಮಾನತು ಮಾಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬ ಕೆ.ಆರ್. ತಿಳಿಸಿದ್ದಾರೆ.