-->
ಮಂಗಳೂರು: ಹೈಟೆಕ್ ವೇಶ್ಯೆವಾಟಿಕೆ ಪ್ರಕರಣದಲ್ಲಿ ಮತ್ತೋರ್ವ ಪೊಲೀಸ್ ಬಲೆಗೆ

ಮಂಗಳೂರು: ಹೈಟೆಕ್ ವೇಶ್ಯೆವಾಟಿಕೆ ಪ್ರಕರಣದಲ್ಲಿ ಮತ್ತೋರ್ವ ಪೊಲೀಸ್ ಬಲೆಗೆ

ಮಂಗಳೂರು: ಇತ್ತೀಚೆಗೆ ಮಂಗಳೂರು ನಗರದಲ್ಲಿ ಬೆಳಕಿಗೆ ಬಂದ ಹೈಟೆಕ್ ವೇಶ್ಯೆವಾಟಿಕೆ ಪ್ರಕರಣದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 16ಕ್ಕೇರಿದೆ.

ಮಂಗಳೂರು ನಗರದ ಉಳ್ಳಾಲ ನಿವಾಸಿ ಅಬ್ದುಲ್ ರಾಝೀಕ್ ಉಳ್ಳಾಲ ಅಲಿಯಾಸ್ ರಫೀಕ್ ಉಳ್ಳಾಲ(44) ಬಂಧಿತ ಆರೋಪಿ.

ಇತ್ತೀಚೆಗೆ ಮಂಗಳೂರಿನ ನಂದಿಗುಡ್ಡೆಯ ಫ್ಲಾಟ್ ವೊಂದರಲ್ಲಿ ಅಪ್ರಾಪ್ತೆಯರು ಹಾಗೂ ಯುವತಿಯರನ್ನು ಬಳಸಿ ವೇಶ್ಯೆವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು.  ಪ್ರಕರಣದಲ್ಲಿ ಮನೆಯ ಮಾಲಕಿ ಸೇರಿದಂತೆ ಪಿಂಪ್ ಗಳು ಅಪ್ರಾಪ್ತೆಯರು, ಯುವತಿಯರನ್ನು ಆಮಿಷ, ಬೆದರಿಕೆಗಳನ್ನೊಡ್ಡಿ ಈ ದಂಧೆಗೆ ಬಳಸುತ್ತಿರುವುದು ಬೆಳಕಿಗೆ ಬಂದಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ  ಮಂಗಳೂರು ಸಿಸಿಬಿ ಪೊಲೀಸರು ತನಿಖೆ ಕೈಗೊಂಡು ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಒಟ್ಟು10 ಪ್ರಕರಣಗಳನ್ನು ದಾಖಲಿಸಿದ್ದರು. 

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದವರು, ಪಿಂಪ್ ಗಳು ಹಾಗೂ ಲೈಂಗಿಕ ಕಿರುಕುಳ ನೀಡಿರುವ ಆರೋಪಿಗಳು ಸೇರಿದಂತೆ ಈಗಾಗಲೇ ಒಟ್ಟು 15 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆರೋಪಿಗಳೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆ ಕೈಗೊಂಡು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಬ್ದುಲ್ ರಾಝೀಕ್ ಉಳ್ಳಾಲ ಬಂಧಿಸಿರುವ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತನಿಖೆ ಮುಂದುವರಿದಿದೆ.

Ads on article

Advertise in articles 1

advertising articles 2

Advertise under the article