Accident- ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ: ಮಂಗಳೂರು ಹೆಡ್ ಕಾನ್ಸ್‌ಟೇಬಲ್‌ಗೆ ಗಂಭೀರ ಗಾಯ
Thursday, March 31, 2022
ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ: ಮಂಗಳೂರು ಹೆಡ್ ಕಾನ್ಸ್‌ಟೇಬಲ್‌ಗೆ ಗಂಭೀರ ಗಾಯ
ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ನಡೆದ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ನ ಹೆಡ್ ಕಾನ್ಸ್‌ಟೇಬಲ್ ಗಂಭೀರ ಗಾಯಗೊಂಡ ಘಟನೆ ಕೊಡಾಜೆ ಎಂಬಲ್ಲಿ ನಡೆದಿದೆ.
ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆ ಕೂಡಿದ ಚಾಲನೆಯಿಂದ ಈ ಅವಘಡ ಸಂಭವಿಸಿದೆ. ಬೈಕ್ ನಲ್ಲಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಧರ್ಣಪ್ಪ ಗೌಡ ಮತ್ತು ಅವರ ಪುತ್ರಿ ಪ್ರಯಾಣಿಸುತ್ತಿದ್ದರು.
ಗಂಭೀರ ಗಾಯಗೊಂಡ ಧರ್ಣಪ್ಪ ಗೌಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.