ಮಂಗಳೂರು ಏರ್ಪೋಟ್ ನಲ್ಲಿ ಬುರ್ಕಾದ ಬಟನ್ ಒಳಗಡೆ ಬಚ್ಚಿಟ್ಟು 100 ಗ್ರಾಂ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿ ವಶಕ್ಕೆ
Friday, April 15, 2022
ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ
ಬುರ್ಕಾದ ಬಟನ್ನೊಳಗೆ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದುಬೈನಿಂದ ಮಂಗಳೂರಿಗೆ ನಿನ್ನೆ ವಿಮಾನದಲ್ಲಿ ಬಂದಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಆಗ ಆತ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಅನುಮಾನದ ಮೇರೆಗೆ ಈ ಪ್ರಯಾಣಿಕನಲ್ಲಿದ್ದ ಬುರ್ಕಾವನ್ನು ತಪಾಸಣೆ ಮಾಡಿದಾಗ, ಅದರ ಬಟನ್ನೊಳಗಡೆ ಉಂಗುರದಾಕಾರದಲ್ಲಿ ಚಿನ್ನವನ್ನು ಅಡಗಿಸಿಡಲಾಗಿತ್ತು. ಈತ ಬಳಿಯಿಂದ ಕಸ್ಟಮ್ಸ್ ಅಧಿಕಾರಿಗಳು 5,34,000 ರೂ. ಮೌಲ್ಯದ 100 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಚಿನ್ನ ಸಹಿತ ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.