ಬೆಂಗಳೂರಿನಲ್ಲಿ 37 ಕೋಟಿ ರೂ. ಮೌಲ್ಯದ ಮಾದಕದ್ರವ್ಯ ವಶಕ್ಕೆ: ಮೂವರು ಅಂತರಾಜ್ಯ ಆರೋಪಿಗಳು ಅರೆಸ್ಟ್
Friday, April 8, 2022
ಬೆಂಗಳೂರು: ಉದ್ಯಮಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗಳನ್ನು ಗುರಿಯಾಗಿಸಿಕೊಂಡು ಮಾದಕ ದ್ರವ್ಯಗಳನ್ನು ಸರಬರಾಜು ಮಾಡುತ್ತಿದ್ದ ಮೂವರು ಅಂತರರಾಜ್ಯ ಆರೋಪಿಗಳನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 37 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಎಚ್‍ಬಿಆರ್ ಲೇಔಟ್, 5ನೇ ಹಂತ, 1ನೇ ಬ್ಲಾಕ್, ಫಾರೆಸ್ಟ್ ಕಚೇರಿ ಹಿಂಭಾಗದಲ್ಲಿರುವ ವಾಟರ್ ಟ್ಯಾಂಕ್ ಬಳಿ ಮಾದಕವಸ್ತುಗಳನ್ನು ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ತಕ್ಷಣ ಪೊಲೀಸ್ ಠಾಣಾ ನಿರೀಕ್ಷಕ ಹಾಗೂ ತಂಡ ದಾಳಿ ನಡೆಸಿ ಮೂವರು ಅಂತರರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಸೆಲೆಬ್ರಿಟಿಗಳು, ವಿದ್ಯಾರ್ಥಿಗಳು, ಉದ್ಯಮಿಗಳನ್ನು ಹಾಗೂ ತನ್ನದೇ ಆದ ಗಿರಾಕಿಗಳಿಗೆ ಮೆಥಾ ಕ್ವಾಲೋನ್, ಕೊಕೈನ್, ಎಂಡಿಎಂಎ, ಟ್ರೊಮೊಡೋಲ್ ಎಂಬ ಮಾದಕವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ.
ಆರೋಪಿಗಳಿಂದ 37 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳ ವಿರುದ್ಧ ಎನ್‍ಡಿಪಿಎಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.