ಕಾರು ಅಪಘಾತಕ್ಕೆ ಚಾಲಕ ಬಲಿ: ಸಣ್ಣಪುಟ್ಟ ಗಾಯಗಳೊಂದಿಗೆ ಸ್ವಾಮೀಜಿ ಪಾರು
Monday, April 11, 2022
ಗದಗ: ಇಲ್ಲಿನ ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರು ಅಪಘಾತವಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ಸ್ವಾಮೀಜಿಯೊಬ್ಬರು ಸಣ್ಣ - ಪುಟ್ಟ ಗಾಯಗಳೊಂದಿಗೆ ಪಾರಾಗಿರುವ ಘಟನೆ ಸಂಭವಿಸಿದೆ. ಗಾಯಾಳು ಸ್ವಾಮೀಜಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಾಲಕ ವೀರೇಶ ಕುರುಡಗಿ (38) ಮೃತಪಟ್ಟ ವ್ಯಕ್ತಿ.
ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಮಠದಲ್ಲಿನ ಸವದತ್ತಿ ಮೂಡಿ ಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಸಂಚರಿಸುತ್ತಿದ್ದ ಕಾರು, ಗದಗ ಜಿಲ್ಲೆಯ ನರಗುಂದ ಪಟ್ಟಣದ ಹೊರವಲಯದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಚಾಲಕ ವೀರೇಶ ಕುರುಡಗಿ ಸ್ಥಳದ್ಲಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಶ್ರೀಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.