ಮಂಗಳೂರು: ಪಾವಂಜೆಯಲ್ಲಿ ಭೀಕರ ಅಪಘಾತಕ್ಕೆ ಇಬ್ಬರು ಬಲಿ; ಓರ್ವ ಗಂಭೀರ
Friday, April 22, 2022
ಮಂಗಳೂರು: ಭೀಕರ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಪಾವಂಜೆಯ ಸಮೀಪ ಸಂಭವಿಸಿದೆ. ರಾತ್ರಿ ನಡೆದ ಮಾರುತಿ ಓಮ್ನಿ ಕಾರು ಹಾಗೂ ಎಕ್ಸ್ಪ್ರೆಸ್ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುಕ್ಕಪಡ್ರೆ ನಿವಾಸಿಗಳಾದ ಭುಜಂಗ ಹಾಗೂ ವಸಂತ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕಾರು ಚಾಲಕ ಬಾಲಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಳೆಯಂಗಡಿ ಒಳ ರಸ್ತೆಯಿಂದ ಪಾವಂಜೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ವೇಳೆ ಓಮ್ನಿ ಕಾರು ಮಂಗಳೂರಿನಿಂದ ಬರುತ್ತಿದ್ದ ಎಕ್ಸ್ಪ್ರೆಸ್ ಬಸ್ಸಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗಯ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.