ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಕಂದಕಕ್ಕೆ ಉರುಳಿದ ಬಸ್: ಆರು ಮಂದಿ ಸಾವು!
Wednesday, April 27, 2022
ಬಿಹಾರ: ಬೈಕ್ ಸವಾರನನ್ನು ಉಳಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿಹಾರದ ಲಲಿತ್ ಪುರಜಿಲ್ಲೆಯ ಮಸೌರಾ ಕಲಾನ್ ಪ್ರದೇಶದಲ್ಲಿ ನಡೆದಿದೆ.
ಈ ದುರ್ಘಟನೆಯಲ್ಲಿ 25ಕ್ಕೂ ಅಧಿಕ ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಲಲಿತ್ ಪುರದಿಂದ ಧೋರಿ ಸಾಗರ್ ಗೆ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಸವಾರನೋರ್ವನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಬಸ್ ಚಾಲಕ ಆತನಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.
ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆದಿದ್ದಾರೆ. ಆದರೆ ದುರಾದೃಷ್ಟವಶಾತ್ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.