IAS ಅಧಿಕಾರಿಯ ಕಾರು ಪಲ್ಟಿ: DC, ಕುಟುಂಬದವರು ಪ್ರಾಣಾಪಾಯದಿಂದ ಪಾರು
IAS ಅಧಿಕಾರಿಯ ಕಾರು ಪಲ್ಟಿ: DC, ಕುಟುಂಬದವರು ಪ್ರಾಣಾಪಾಯದಿಂದ ಪಾರು
ಡಿಸಿಯಾಗಿ ಅಧಿಕಾರ ಸ್ವೀಕರಿಸಲು ವಿಜಯಪುರಕ್ಕೆ ಕುಟುಂಬ ಸಮೇತ ಹೊರಟಿದ್ದ IAS ಅಧಿಕಾರಿಯಿದ್ದ ಕಾರು ಪಲ್ಟಿಯಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ನಡೆದಿದೆ.
IAS ಅಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್ ಹಾಗೂ ಪ್ರವೀಣ ಕುಮಾರ ಕಾರಿನಲ್ಲಿದ್ದರು. ಮುಂಜಾನೆ 5 :30ಕ್ಕೆ ಘಟನೆ ನಡೆದಿದೆ.
ಅವಘಾತದಲ್ಲಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರು ಸೇರಿದಂತೆ ಪತ್ನಿ ಹಾಗೂ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣ ಅವರನ್ನು ಎಸ್ ಡಿ ಎಂ ಕಾಲೇಜು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ದಾವಣಗೆರೆ ಜಿಲ್ಲಾ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದ ವಿಜಯಮಹಾಂತೇಶ ದಾನಮ್ಮನವರ ವರ್ಗಾವಣೆ ಆದೇಶ ಒಂದು ದಿನದ ಹಿಂದಷ್ಟೇ ಬಂದಿತ್ತು. ಅವರು ವಿಜಯಪುರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ಪ್ರಯಾಣ ಬೆಳೇಸಿದ್ದರು. ಈ ಸಂದರ್ಭದಲ್ಲಿ ದಾರಿ ಮಧ್ಯೆ ಈ ದುರ್ಘಟನೆ ನಡೆದಿದೆ.