Job in Karnataka Apex Bank- ಅಪೆಕ್ಸ್ ಬ್ಯಾಂಕಿನಲ್ಲಿ ನೇಮಕಾತಿ: ಅರ್ಜಿ ಸಲ್ಲಿಕೆಗೆ ಕೆಲವೇ ದಿನ ಬಾಕಿ!
ಅಪೆಕ್ಸ್ ಬ್ಯಾಂಕಿನಲ್ಲಿ ನೇಮಕಾತಿ: ಅರ್ಜಿ ಸಲ್ಲಿಕೆಗೆ ಕೆಲವೇ ದಿನ ಬಾಕಿ!
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು, ಇಲ್ಲಿ ಖಾಲಿಯಿರುವ 'ಬ್ಯಾಂಕ್ ಸಹಾಯಕ'ರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೊರಿಯರ್ ಇತ್ಯಾದಿ ಮೂಲಕ ಕಳುಹಿಸಲು ಅವಕಾಶವಿರುವುದಿಲ್ಲ
ಹುದ್ದೆಗಳ ಸಂಖ್ಯೆ :
ಪ್ರಸ್ತುತ ಒಟ್ಟು ಹುದ್ದೆಗಳ ಸಂಖ್ಯೆ 79 ಇರುತ್ತವೆ. ನೇಮಕಾತಿ ಸಂದರ್ಭದಲ್ಲಿ ಅವಶ್ಯಕತೆಗೆ ಅನುಗುಣವಾಗಿ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸುವ/ಕಡಿಮೆ ಮಾಡುವ ಅಧಿಕಾರವನ್ನು ಬ್ಯಾಂಕು ಹೊಂದಿರುತ್ತದೆ.
ವಯೋಮಿತಿ : ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 18 ವರ್ಷ ವಯಸ್ಸು ತುಂಬಿರಬೇಕು. ಈ ಕೆಳಕಂಡಂತೆ ಗರಿಷ್ಠ ವಯೋಮಿತಿ ಮೀರಿರಬಾರದು.
ವೇತನ ಶ್ರೇಣಿ: 28425-955-33200-1310-41060-1800-50060-2080-62540-2235-87125.
ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಪರೀಕ್ಷೆಯಲ್ಲಿ ಭಾಷಾ ವಿಷಯಗಳು ಸೇರಿದಂತೆ ಕ್ರೋಢೀಕೃತ ಶೇಕಡ 60 ರಷ್ಟು ಅಂಕಗಳೊಂದಿಗೆ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳು ಕನಿಷ್ಟ ಶೇಕಡ 55ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
ಅಭ್ಯರ್ಥಿಗಳು ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು
ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆ
ನೀಡಲಾಗುವುದು.
ಅರ್ಜಿಯನ್ನು ಕಡ್ಡಾಯವಾಗಿ ಆನ್ ಲೈನ್ ಮುಖಾಂತರವೇ ಬ್ಯಾಂಕಿನ ವೆಬ್‌ಸೈಟ್
http://www.karnatakaapex.com/ ಮೂಲಕವೇ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಪ್ರಕಟಣೆಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಳ್ಳುವುದು. ಇದಲ್ಲದೆ ಅರ್ಜಿ ಸಲ್ಲಿಸಲು ಅಗತ್ಯವಾದ ಮಾರ್ಗದರ್ಶನವನ್ನು ವೆಬ್‌ಸೈಟ್ ನಲ್ಲಿ ತಪ್ಪದೇ ಓದಿಕೊಳ್ಳುವುದು.
ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ :
ಆಸಕ್ತ ಅಭ್ಯರ್ಥಿಗಳು ಒಮ್ಮೆ ಮಾತ್ರ ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಗೆ ತಿದ್ದುಪಡಿ ಮಾಡಲು ಅವಕಾಶವಿರುವುದಿಲ್ಲ.
ಅಭ್ಯರ್ಥಿಯು ಲೇಟೆಸ್ಟ್ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಬಿಳಿ ಹಾಳೆ ಮೇಲಿಟ್ಟು ಅದರ ಕೆಳಗೆ ಕಪ್ಪು ಶಾಹಿಯ ಸ್ಕೆಚ್/ಮಾರ್ಕರ್ ಪೆನ್‍ಲ್ಲಿ ಸಹಿಯನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್‌ಲೋಡ್ ಮಾಡಬೇಕು. ಭಾವಚಿತ್ರ ಹಾಗೂ ಸಹಿಯನ್ನು ಅಪ್‌ಲೋಡ್ ಮಾಡದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಮೀಸಲಾತಿಯನ್ನು ಕೋರುವ ಎಲ್ಲಾ ಅಭ್ಯರ್ಥಿಗಳು ಸಂಬಂಧಿಸಿದ ಮೀಸಲಾತಿ ಪ್ರಮಾಣ ಪತ್ರಗಳನ್ನು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಪಡೆದಿಟ್ಟುಕೊಂಡು ಅರ್ಜಿಯೊಂದಿಗೆ ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು. ಕೊನೆಯ ದಿನಾಂಕದ ನಂತರ ಪಡೆದ ಮೀಸಲಾತಿ ಪ್ರಮಾಣಪತ್ರಗಳನ್ನು ಪರಿಗಣಿಸುವುದಿಲ್ಲ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ತಕ್ಷಣ ಅರ್ಜಿಯಲ್ಲಿ ನಮೂದಿಸಿದ ವಿವರಗಳ ಆಧಾರದ ಮೇಲೆ
ನೀಡುವ ನೋಂದಣಿ ಸಂಖ್ಯೆ, ಅರ್ಜಿಯ ಡೌನ್‌ಲೋಡ್ ಮಾಡಿದ ಪ್ರತಿಯನ್ನು ಮುದ್ರಿಸಿಕೊಂಡು ತಮ್ಮೊಂದಿಗೆ ತಪ್ಪದೇ ಇಟ್ಟುಕೊಳ್ಳುವುದು ಹಾಗೂ ಪರಿಶೀಲನಾ ಸಮಯದಲ್ಲಿ ಇವುಗಳನ್ನು ಹಾಜರುಪಡಿಸುವುದು.