ಮಲ್ಪೆ ಬೀಚ್ ನಲ್ಲಿ ಸಮುದ್ರ ವಿಹಾರಕ್ಕೆ ಬಂದ ಮೂವರು ವಿದ್ಯಾರ್ಥಿಗಳು ನೀರು ಪಾಲು: ಓರ್ವ ನಾಪತ್ತೆ
Thursday, April 7, 2022
ಉಡುಪಿ: ಮಲ್ಪೆ ಬೀಚ್ ನಲ್ಲಿ ಈಜಾಡಲು ಹೋಗಿರುವ ಕೇರಳ ಮೂಲದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಮುದ್ರ ಪಾಲಾಗಿರುವ ಘಟನೆ ನಡೆದಿದೆ. ಅಲ್ಲದೆ ಓರ್ವ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ. ಆತನಿಗಾಗೊ ಶೋಧ ಕಾರ್ಯ ಮುಂದುವರಿದಿದೆ.
ಕೇರಳದ ಕೊಟ್ಟಾಯಂನಿಂದ ಮಂಗಳಂ ಇಂಜಿನಿಯರಿಂಗ್ ಕಾಲೇಜಿನ 80ಕ್ಕೂ ಅಧಿಕ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸಕ್ಕೆ ಬಂದಿದ್ದರು. ಎಲ್ಲರೂ ಮಲ್ಪೆ ತೋನ್ಸೆಪಾರ್ ದ್ವೀಪದ ಬಳಿ ಸಮುದ್ರ ವಿಹಾರ ಮಾಡಿ, ಈಜಲೆಂದು ನೀರಿಗಿಳಿದಿದ್ದಾರೆ. ಈ ಪೈಕಿ ಅಲೆನ್ ರೆಜಿ, ಅಮಲ್, ಅನಿಲ್ ಎಂಬ ವಿದ್ಯಾರ್ಥಿಗಳು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ. ತಕ್ಷಣ ಅವರನ್ನು ಸಮುದ್ರದಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಅವರು ಯಾರೂ ಬದುಕಲಿಲ್ಲ.
ಇವರೊಂದಿಗೆ ನೀರೊಗಿಳಿದಿದ್ದ ಮತ್ತೊಬ್ಬ ವಿದ್ಯಾರ್ಥಿ ನೀರಲ್ಲಿ ಮುಳುಗಿದ್ದು, ಆತನ ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಮಲ್ಪೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.