ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯೊಂದಿಗೆ ಪರೀಕ್ಷಾ ಕೇಂದ್ರದಲ್ಲಿ ಅನುಚಿತ ವರ್ತನೆ: ಶಿಕ್ಷಕನ ವಿರುದ್ಧ ಪೊಕ್ಸೊ ಪ್ರಕರಣ ದಾಖಲು
Tuesday, April 12, 2022
ಹಾವೇರಿ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳು ಬರುವಂತೆ ಮಾಡುವೆನೆಂದು ವಿದ್ಯಾರ್ಥಿನಿಯೊಂದಿಗೆ ಶಿಕ್ಷಕನೊಬ್ಬ ಅನುಚಿತವಾಗಿ ವರ್ತಿಸಿರುವ ಘಟನೆಯೊಂದು ಹಾವೇರಿ ಜಿಲ್ಲೆಯಲ್ಲಿ ತಡವಾಗಿ ಬಹಿರಂಗಗೊಂಡಿದೆ. ಇದೀಗ ಶಿಕ್ಷಕನ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದೆ.
ಆರೋಪಿ ಶಿಕ್ಷಕ ಪರಮೇಶ ಐರಣಿ(54) ಎಂಬಾತನ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಸರಕಾರಿ ಉರ್ದು ಪ್ರಾಥಮಿಕ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿದ್ದ ಪರಮೇಶ ಐರಣಿ, ಎಸ್ಎಸ್ಎಲ್‌ಸಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಈತ ಪರೀಕ್ಷೆ ಆರಂಭವಾದ ದಿನದಿಂದಲೇ ವಿದ್ಯಾರ್ಥಿನಿಯೊಬ್ಬಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಈತ ಅಧಿಕ ಅಂಕ ಬರುವಂತೆ ಮಾಡುತ್ತೇನೆಂದು ಆಮಿಷ ಒಡ್ಡಿದ್ದ ಎಂದು ದೂರಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.