Election Process begins to elect SVT trustees- ರಥಬೀದಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ಚುನಾವಣೆ: ನಾಮಪತ್ರಕ್ಕೆ ಮಂಗಳವಾರ ಕೊನೆ ದಿನ
ರಥಬೀದಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ಚುನಾವಣೆ: ನಾಮಪತ್ರಕ್ಕೆ ಮಂಗಳವಾರ ಕೊನೆ ದಿನ
ಮಂಗಳೂರು ಮಹಾನಗರ ಪಾಲಿಕೆಗೆ ಒಳಪಟ್ಟ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಬಾಂಧವರ ಪ್ರಮುಖ ಶ್ರದ್ಧಾಕೇಂದ್ರವಾಗಿರುವ ವೆಂಕಟರಮಣ ದೇವಸ್ಥಾನ ರಥಬೀದಿ ಮಂಗಳೂರು ಇದರ ಆಡಳಿತ ಮಂಡಳಿ ಆಯ್ಕೆಗೆ ಚುನಾವಣೆ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸೂಚನೆಯಂತೆ ವೆಂಕಟರಮಣ ದೇವಸ್ಥಾನ ರಥಬೀದಿ ಇದರ ಆಡಳಿತ ಮಂಡಳಿಯ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಏಪ್ರಿಲ್ 15 2022ರ ಒಳಗೆ ಚುನಾವಣೆ ನಡೆಸಲು ನಿರ್ದೇಶನ ನೀಡಲಾಗಿದೆ.
ಈ ಬಗ್ಗೆ ಚುನಾವಣೆ ಪ್ರಕ್ರಿಯೆಯನ್ನು ಮಹಾಸಭೆಯಲ್ಲಿ ಅನುಮೋದಿಸಿ ವೇಳಾಪಟ್ಟಿ ಪ್ರಕಟಿಸಲಾಗಿದೆ. ಸೋಮವಾರ ಏಪ್ರಿಲ್ 14 2022ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ.
ನಾಮಪತ್ರ ಸಲ್ಲಿಸಲು 5-4- 2022 ಕೊನೆಯ ದಿನವಾಗಿರುತ್ತದೆ. ಬುಧವಾರ ನಾಮಪತ್ರ ಪರಿಶೀಲನೆ ಮಾಡಲಿದ್ದು ಗುರುವಾರ ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನಾಂಕವಾಗಿರುತ್ತದೆ. ಶುಕ್ರವಾರ 8-4-2022ರಂದು ಸ್ಪರ್ಧಿಸುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.
ಮತದಾನವು 11-04-2022ರ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದೆ. ಆ ದಿನವೇ ಮತ ಎಣಿಕೆ ಕಾರ್ಯ ನಡೆಯಲಿದ್ದು, ಚುನಾವಣಾ ಅಧಿಕಾರಿ ಅದೇ ದಿನ ಫಲಿತಾಂಶ ಘೋಷಣೆ ಮಾಡಲಿದ್ದಾರೆ.