-->
ದೆಹಲಿಯ ಇಡಿಯಿಂದ ನಟಿ ಜಾಕ್ವೆಲಿನ್ ಫರ್ನಾಂಡಿಸ್ 7 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ದೆಹಲಿಯ ಇಡಿಯಿಂದ ನಟಿ ಜಾಕ್ವೆಲಿನ್ ಫರ್ನಾಂಡಿಸ್ 7 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ನವದೆಹಲಿ: 200 ಕೋಟಿ ರೂ. ವಂಚಕ ಸುಕೇಶ್ ಚಂದ್ರಶೇಖರ್ ನಿಂದ ದುಬಾರಿ ಗಿಫ್ಟ್ ಪಡೆದುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ನಟಿ ಜಾಕ್ವೆಲಿನ್ ಫರ್ನಾಂಡಿಸ್ ರವರ 7 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.

ವಂಚಕ ಸುಕೇಶ್ ಚಂದ್ರಶೇಖರ್ ನಡೆಸಿರುವ 200 ಕೋಟಿ ರೂ. ವಂಚನೆಯ ಪ್ರಕರಣದಲ್ಲಿ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ಸಿಲುಕಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಜಾರಿ ನಿರ್ದೇಶನಾಲಯ ಅವರ ಆಸ್ತಿಯನ್ನು ಜಪ್ತಿ ಮಾಡಿದೆ. 

ಉದ್ಯಮಿಯೊಬ್ಬರ ಪತ್ನಿಗೆ 200 ಕೋಟಿ ರೂ. ವಂಚನೆ ಮಾಡಿರುವ ಆರೋಪದಡಿ ಸುಕೇಶ್ ಚಂದ್ರಶೇಖರ್​​ನನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬಂಧಿಸಿದ್ದರು. ಈ ಸಂದರ್ಭ ನಟಿ ಜಾಕ್ವೆಲಿನ್​ ಹಾಗೂ ಸುಕೇಶ್​ ಚಂದ್ರಶೇಖರ್​ ನಡುವಿನ ಸಂಬಂಧ ಬಯಲಾಗಿತ್ತು. ವಿಚಾರಣೆಯ ವೇಳೆ ಸುಕೇಶ್​ ಚಂದ್ರಶೇಖರ್ ನಟಿ ಜಾಕ್ವೆಲಿನ್​ಗೆ ಐಷಾರಾಮಿ ವಸ್ತುಗಳನ್ನು ಉಡುಗೊರೆಯಾಗಿ ನೀಡಿರುವುದಾಗಿ ಹೇಳಿಕೊಂಡಿದ್ದನು. ಇದರ ಬೆನ್ನಲ್ಲೇ ಜಾಕ್ವೆಲಿನ್ ಹಾಗೂ ಸುಕೇಶ್​​ರ ಕೆಲ ಖಾಸಗಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಅದರ ಜೊತೆಗೆ ಆತ ಜಾಕ್ವೆಲಿನ್​ಗಾಗಿ ಮೂರು ಸರಣಿಗಳ 500 ಕೋಟಿ ರೂ. ಬಜೆಟ್​​ನ ಸೂಪರ್ ಹೀರೋ​ ಪ್ರಾಜೆಕ್ಟ್​ ಮಾಡಲು ಮುಂದಾಗಿದ್ದ ಎಂದು ಮೂಲಗಳಿಂದ ತಿಳಿದು ಬಂದಿತ್ತು.

Ads on article

Advertise in articles 1

advertising articles 2

Advertise under the article