ಹಿಂಬದಿಯಿಂದ ಬಂದ ಕಾರು ಡಿಕ್ಕಿ: ವಿದ್ಯಾರ್ಥಿನಿ ಮೃತ್ಯು, ವಿದ್ಯಾರ್ಥಿ ಗಂಭೀರ ಗಾಯ
Monday, May 2, 2022
ಬಳ್ಳಾರಿ: ವಿದ್ಯಾರ್ಥಿಗಳಿಬ್ಬರು ಸಂಚರಿಸುತ್ತಿದ್ದ ಬೈಕ್ಗೆ ಹಿಂನಿನಿಂದ ಕಾರೊಂದು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿನಿ ಮೃತಪಟ್ಟು ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ದುರ್ಘಟನೆಯೊಂದು ಬಳ್ಳಾರಿ ಜಿಲ್ಲೆಯ ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಪಘಾತದಲ್ಲಿ ವಿದ್ಯಾರ್ಥಿನಿ ಅಶ್ವಿನಿ(22) ಮೃತಪಟ್ಟಿದ್ದು, ಬೈಕ್ ಚಲಾಯಿಸುತ್ತಿದ್ದ ನಂದೀಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಳ್ಳಾರಿ ನಗರದಿಂದ ಕುರುಗೋಡಿನ ದೊಡ್ಡಬಸವೇಶ್ವರ ದೇವಸ್ಥಾನಕ್ಕೆ ಹೋದ ವಿದ್ಯಾರ್ಥಿಗಳಿಬ್ಬರು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕುರುಗೋಡ-ಬಳ್ಳಾರಿ ಮಾರ್ಗ ಮಧ್ಯೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಅಶ್ವಿನಿ ಸ್ಥಳದಲ್ಲಿಯೇ ಮೃತಪಟ್ಟರೆ, ನಂದೀಶ್ ಗಂಭೀರವಾಗಿ ಗಾಯಗೊಂಡಿದ್ದಾನೆ.
ಗಂಭೀರ ಗಾಯಗೊಂಡ ನಂದೀಶ್ ನನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಯಲ್ಲಿ ಅಶ್ವಿನಿ ಸಾವನ್ನಪ್ಪಿದ್ದಾಳೆ. ಕಾರು ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದ. ಮಾಹಿತಿ ತಿಳಿದ ಪೊಲೀಸರು ಬೆನ್ನಟ್ಟಿ ಕಾರು ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.