ವಿಟ್ಲ: ದಲಿತ ಬಾಲಕಿಯ ಆತ್ಮಹತ್ಯೆ ಪ್ರಕರಣ; ಪ್ರೀತಿಸುವಂತೆ ಪೀಡಿಸುತ್ತಿದ್ದಾತ ಅಂದರ್
Saturday, May 7, 2022
ಮಂಗಳೂರು: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಕಣಿಯೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಅಲಿಯಾಸ್ ಕುಟ್ಟ ಬಂಧಿತ ಆರೋಪಿ.
ಕಣಿಯೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಲಿತ ಬಾಲಕಿಗೆ ಆರೋಪಿ ಶಾಹುಲ್ ಹಮೀದ್ ಪ್ರೀತಿ ಮಾಡುವಂತೆ ಪೀಡಿಸುತ್ತಿದ್ದ. ಈತನ ಕಿರುಕುಳದಿಂದ ಬೇಸತ್ತು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೊಲೀಸ್ ದೂರು ದಾಖಲಾಗಿತ್ತು. ಈ ಬಗ್ಗೆ ವಿಟ್ಲ ಠಾಣಾ ಅ.ಕ್ರ 68/2022 ಕಲಂ:305 ಬಾಧಂಸಂ ಮತ್ತು ಕಲಂ: 3(2)(v), 3(2)(va) The SC & ST (Prevention of Atrocities) Amendment Act 2015 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಬಂಟ್ವಾಳ ಉಪವಿಭಾಗ ಸಹಾಯಕ ಪೊಲೀಸ್ ಅಧೀಕ್ಷಕ ಶಿವಾಂಶು ರಜಪೂತ ಅವರ ನೇತೃತ್ವದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕಣಿಯೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಪತ್ತೆಗೆ ಎರಡು ತಂಡಗಳನ್ನು ರಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿ ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.