ಇಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಮಾಡುತ್ತಿದ್ದ ಯುವತಿ ವಿದ್ಯುತ್ ಶಾಕ್ ನಿಂದ ಮೃತ್ಯು
Monday, May 23, 2022
ಕರಡ್ (ಮಹಾರಾಷ್ಟ್ರ): ಇಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಮಾಡುತ್ತಿದ್ದ ವೇಳೆ ಯುವತಿಯೋರ್ವಳು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಮಹಾರಾಷ್ಟ್ರದ ಕರಡ್ ಗ್ರಾಮದಲ್ಲಿ ನಡೆದಿದೆ.
ಶಿವಾನಿ ಅನಿಲ್ ಪಾಟೀಲ್ (23) ಮೃತಪಟ್ಟಿರುವ ಯುವತಿ.
ಕರಡ್ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿರುವ ಪ್ರಕಾರ, ಭಾನುವಾರ ಮಧ್ಯಾಹ್ನ ವೇಳೆ ಇಲೆಕ್ಟ್ರಿಕ್ ಬೈಕ್‌ನ ಬ್ಯಾಟರಿಯನ್ನು ಚಾರ್ಜ್ ಮಾಡುತ್ತಿದ್ದರು. ಈ ವೇಳೆ ಶಿವಾನಿ ಪಾಟೀಲ್ಗೆ ವಿದ್ಯುತ್ ಆಘಾತವಾಗಿ ಗಂಭೀರ ಸ್ಥಿತಿಯಲ್ಲಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ನೀಡುವ ಮುನ್ನವೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ಕರಡ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.