ಕಾರ್ಮಿಕರ ಮಕ್ಕಳಿಗೆ ಸ್ಕಾಲರ್‌ಶಿಪ್: ಅರ್ಜಿ ಸಲ್ಲಿಸಲು ಗಡುವು ವಿಸ್ತರಣೆ
Tuesday, May 3, 2022
ಕಾರ್ಮಿಕರ ಮಕ್ಕಳಿಗೆ ಸ್ಕಾಲರ್‌ಶಿಪ್: ಅರ್ಜಿ ಸಲ್ಲಿಸಲು ಗಡುವು ವಿಸ್ತರಣೆ
ಕಟ್ಟಡ ಮತ್ತು ಇತರ ಕಾರ್ಮಿಕರ ಮಕ್ಕಳಿಗೆ ಶಿಕ್ಷಣಕ್ಕಾಗಿ ಕಲ್ಯಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೀಡುವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇದ್ದ ಅವಧಿಯನ್ನು ವಿಸ್ತರಿಸಲಾಗಿದೆ.
ಈ ಹಿಂದೆ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿತ್ತು. ಇದೀಗ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ ಈ ಬಗ್ಗೆ ಕಾರ್ಮಿಕ ಇಲಾಖೆ ಪ್ರಕಟಣೆ ಹೊರಡಿಸಿದೆ.
ಕಟ್ಟಡ ಕಾರ್ಮಿಕರು ಹಾಗೂ ನೋಂದಾಯಿತ ಕಾರ್ಮಿಕರು ಕಾರ್ಮಿಕ ಇಲಾಖೆಯ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ ತಮ್ಮ ಮಕ್ಕಳಿಗೆ ಶೈಕ್ಷಣಿಕ ಸ್ಕಾಲರ್ಶಿಪ್ ಪಡೆಯಬಹುದು ಎಂದು ಕಾರ್ಮಿಕ ಇಲಾಖೆ ಮನವಿ ಮಾಡಿದೆ.