-->
ಪತಿಯ ಮನೆಯಲ್ಲಿ ಶೌಚಾಲಯವಿಲ್ಲವೆಂದು ನವವಿವಾಹಿತೆ ಆತ್ಮಹತ್ಯೆಗೆ ಶರಣು

ಪತಿಯ ಮನೆಯಲ್ಲಿ ಶೌಚಾಲಯವಿಲ್ಲವೆಂದು ನವವಿವಾಹಿತೆ ಆತ್ಮಹತ್ಯೆಗೆ ಶರಣು

ಕಡಲೂರು(ತಮಿಳುನಾಡು): ಪತಿಯ ಮನೆಯಲ್ಲಿ ಶೌಚಾಲಯವೇ ಇಲ್ಲವೆಂದು ಮನನೊಂದ ನವವಿವಾಹಿತೆಯೋರ್ವಳು ನೇಣಿಗೆ ಶರಣಾಗಿರುವ ದುರಂತವೊಂದು ತಮಿಳುನಾಡಿನಲ್ಲಿ ನಡೆದಿದೆ. ಇದೀಗ ಈ ಬಗ್ಗೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಖಾಸಗಿ ಆಸ್ಪತ್ರೆಯೊಂದರಲ್ಲಿ ವೃತ್ತಿ ನಿರ್ವಹಿಸುತ್ತಿದ್ದ ರಮ್ಯಾ(27) ಎಂಬ ಈ ಯುವತಿ ಕಾರ್ತಿಕೇಯನ್​ ಎಂಬಾತನೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು. ಇವರಿಬ್ಬರ ಮದುವೆ ಎ. 6ರಂದು ನಡೆದಿತ್ತು. ಆದರೆ ಕಾರ್ತಿಕೇಯನ್​ ಮನೆಯಲ್ಲಿ ಶೌಚಾಲಯವಿರಲಿಲ್ಲ. ಇದರಿಂದ ಎಪ್ರಿಲ್​​ 7ರಂದು ರಮ್ಯಾ ಮರಳಿ ತವರು ಮನೆಗೆ ಹೋಗಿದ್ದಾಳೆ. ಆ ಬಳಿಕವಾದರೂ ಕಾರ್ತಿಕೇಯನ್ ಮನೆಯಲ್ಲಿ ಶೌಚಾಲಯ ನಿರ್ಮಾಣ ಮಾಡಿರಲಿಲ್ಲ. ಇದೇ ವಿಚಾರವಾಗಿ ಪತಿ - ಪತ್ನಿ ನಡುವೆ ತೀವ್ರ ವಾಗ್ವಾದ ಉಂಟಾಗಿದೆ. ಈ ಸಂದರ್ಭ ರಮ್ಯಾಳನ್ನು ಕಾರ್ತಿಕೇಯನ್ ಕೆಟ್ಟದಾಗಿ ನಿಂದಿಸಿದ್ದಾನೆ ಎನ್ನಲಾಗಿದೆ.

ಪರಿಣಾಮ ಮನನೊಂದ ರಮ್ಯಾ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ತಕ್ಷಣವೇ ರಮ್ಯಾಳನ್ನು ಮನೆಯವರು, ಸ್ಥಳೀಯರು ಕಡಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ, ಹೆಚ್ಚಿನ ಚಿಕಿತ್ಸೆಗೋಸ್ಕರ ಪುದುಚೇರಿ ಜಿಪ್ಮರ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ದುರದೃಷ್ಟವಶಾತ್​ ರಮ್ಯಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಘಟನೆ ನಡೆದ ಬೆನ್ನಲ್ಲೇ ರಮ್ಯಾ ತಾಯಿ ಮಂಜುಳಾ ಪೊಲೀಸ್  ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Ads on article

Advertise in articles 1

advertising articles 2

Advertise under the article