ಮಂಗಳೂರು: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು
Wednesday, May 11, 2022
ಮಂಗಳೂರು: ನಗರದ ಫಾದರ್ ಮುಲ್ಲರ್ ಆಸ್ಪತ್ರೆಯ ಮೆಡಿಕಲ್ ಕಾಲೇಜಿನ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ವಿಭಾಗದ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ಇಂದು ನಡೆದಿದೆ.
ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ನಿವಾಸಿ ಪದ್ಮನಾಭ ಎಂಬವರ ಪುತ್ರಿ ಸಾಂಧ್ರಾ ಪಿ.ಪಿ.(21) ನೇಣಿಗೆ ಶರಷಾದ ವಿದ್ಯಾರ್ಥಿನಿ.
ಸಾಂಧ್ರಾ ಪಿ.ಪಿ. ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯ ಬ್ಯಾಚುಲರ್ ಆಫ್ ಫಿಸಿಯೋಥೆರಪಿ (ಬಿಪಿಟಿ) ತೃತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆ ಇಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12.15ರ ಮಧ್ಯೆ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕಳೆದ ಒಂದು ವರ್ಷಗಳಿಂದ ಖಿನ್ನತೆಯಲ್ಲಿ ಬಳಲುತ್ತಿದ್ದಳು. ಈ ಹಿಂದೆಯೂ ಒಮ್ಮೆ ಆಕೆ ಆತ್ಮಹತ್ಯೆ ಯತ್ನ ಮಾಡಿದ್ದಳೆಂದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.