ಬೆಂಗಳೂರು: ಅಪ್ರಾಪ್ತೆ ಅತ್ಯಾಚಾರಗೈದ ನೆರೆಮನೆ ಯುವಕನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
Wednesday, June 29, 2022
ಬೆಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಗೆ ಜಿಲ್ಲಾ ಎಫ್ ಟಿಎಸ್ ಸಿ ನಾಲ್ಕನೇ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
ತಮಿಳುನಾಡು ಮೂಲದ ಆರೋಪಿ ವೆಂಕಟಸ್ವಾಮಿ(24) ಅತ್ಯಾಚಾರ ಎಸಗಿರುವ ಆರೋಪಿ. ಈತ ನೆರೆ ಮನೆಯ ಏಳನೇ ತರಗತಿ ಓದುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಪರಾರಿಯಾಗಿದ್ದಾನೆ.
ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಮಹಾದೇವಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯವು ವಾದ ವಿವಾದವನ್ನು ಆಲಿಸಿ ಆರೋಪಿ ತಪ್ಪಿತಸ್ಥನೆಂದು ಘೋಷಿಸಿ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.